ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬರುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆಯ ಮೇಲೆ ಘನ ವಾಹನ ಸಂಚಾರ ನಿಷೇಧಿಸಿ ಕಳೆದ ವಾರ ಆದೇಶ ಹೊರಡಿಸಿ ಪರ್ಯಾಯ ರಸ್ತೆಯನ್ನು ಸೂಚಿಸಿದ್ದರು.
ಜಿಲ್ಲಾಧಿಕಾರಿಗಳು ಸೂಚಿಸಿದ ಪರ್ಯಾಯ ರಸ್ತೆ ಬಸ್ ಸಂಚಾರಕ್ಕೆ ಅಯೋಗ್ಯವಾಗಿದ್ದರಿಂದ ಕಳೆದ ಒಂದು ವಾರದಿಂದ ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ , ಕಳೆಂಜಿಲ , ಸರೋಳಿಕಾನ , ಬಲ್ನಾಡು ಗ್ರಾಮದ ಸಾಜ , ಒಳಮೊಗ್ರು ಗ್ರಾಮದ ಅಜ್ಜಿಕಲ್ಲು , ಮುಂಡೋವುಮೂಲೆ , ಬೈರೋಡಿ , ಚಿಲ್ಮೆತ್ತಾರು , ಆರ್ಯಾಪು ಗ್ರಾಮದ ಬಲ್ಲೇರಿ , ವಳತ್ತಡ್ಕ ಭಾಗದ ಸಾರ್ವಜನಿಕರು ಹಾಗೂ ವಿಧ್ಯಾರ್ಥಿಗಳು ತೀವ್ರ ತೊಂದರೆಗೊಳಗಾಗಿದ್ದರು.
ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಮನವಿ
ಜಿಲ್ಲಾಧಿಕಾರಿ ತಮ್ಮ ಆದೇಶವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿ ಈ ಭಾಗದ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು , ಸ್ಥಳೀಯ ಜನಪ್ರತಿನಿಧಿಗಳು , ವಿವಿಧ ರಾಜಕೀಯ ಪಕ್ಷಗಳ ಮುಖಂಡರು , ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ , ಸಹಾಯಕ ಆಯುಕ್ತರಿಗೆ ಮನವಿ ಮಾಡಿದರು. ಅಲ್ಲದೆ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ , ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಮಾಜಿ ಶಾಸಕರುಗಳಾದ ಸಂಜೀವ ಮಠಂದೂರು , ಶಕುಂತಲಾ ಟಿ ಶೆಟ್ಟಿ , ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ ಹೊರತಾಗಿಯೂ ಸಮಸ್ಯೆ ಪರಿಹಾರ ಕಂಡಿರಲಿಲ್ಲ.
ವಿವಿಧ ಸಂಘ ಸಂಸ್ಥೆಗಳು , ಸಾರ್ವಜನಿಕರು ರಸ್ತೆ ತಡೆ ಮೂಲಕ ಬೃಹತ್ ಪ್ರತಿಭಟನೆಗೆ ತಯಾರಿ
ಕಳೆದು ಒಂದು ವಾರದಿಂದ ಸಾರ್ವಜನಿಕರು , ವಿಧ್ಯಾರ್ಥಿಗಳು ಪರದಾಡುತ್ತಿದ್ದರು , ಮನವಿ ಮಾಡಿಕೊಂಡರು ಕ್ಯಾರೆ ಅನ್ನದ ಜಿಲ್ಲಾಡಳಿತದ ಡೋಂಟ್ ಕ್ಯಾರ್ ಧೋರಣೆಯನ್ನು ಖಂಡಿಸಿ ಪಕ್ಷಾತೀತವಾಗಿ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಾರ್ವಜನಿಕರು ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಕೆಲವೊಂದು ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.
KSRTC ಮೂಲಕ ಪರ್ಯಾಯ ವ್ಯವಸ್ಥೆ
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕ.ರಾ.ರ.ಸಾ.ಸಂ ವತಿಯಿಂದ ಮೂರು ಹೊತ್ತು ಪುತ್ತೂರು to ಗುಮ್ಮಟಗದ್ದೆ ನಡುವೆ ನಿಗದಿತ ಸಮಯದಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಇದೀಗ ಕ.ರಾ.ರ.ಸಾ.ಸಂ ವತಿಯಿಂದ ಬಸ್ ಸೌಲಭ್ಯ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.