Home ಕರಾವಳಿ ಮಂಗಳೂರು : ದರೋಡೆಕೋರರ ಚಡ್ಡಿ ಗ್ಯಾಂಗ್ ಕೊನೆಗೂ ಪೋಲಿಸರ ವಶಕ್ಕೆ

ಮಂಗಳೂರು : ದರೋಡೆಕೋರರ ಚಡ್ಡಿ ಗ್ಯಾಂಗ್ ಕೊನೆಗೂ ಪೋಲಿಸರ ವಶಕ್ಕೆ

0

ಮಂಗಳೂರು : ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು.

ಈ ಬಗ್ಗೆ ಮಂಗಳೂರು ಪೊಲೀಸರು ಬಿರುಸಿನ ಬಲೆ ಬಿಸಿದ್ದು ಕೇವಲ 24 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಮಧ್ಯಪ್ರದೇಶದ ವಿವಾಸಿಗಳಾಗಿದ್ದು ರಾಜು (24 ವರ್ಷ), ಸಿಂಗ್ವಾನಿಯ,ಮಯೂರ್ 30 ವರ್ಷ),ಬಾಲಿ (22 ವರ್ಷ),ವಿಕ್ಕಿ (21 ವರ್ಷ) ಎಂದು ತಿಳಿದುಬಂದಿದೆ.

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಆರೋಪಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದು ಆ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದರು ಅವರ ಮಾಹಿತಿಯಂತೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದ ಪೊಲೀಸರು ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದ್ದಾರೆ. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಅವರು ಕೃತ್ಯವೆಸಗಿದ ಬಗ್ಗೆ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಅವರನ್ನು ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ

LEAVE A REPLY

Please enter your comment!
Please enter your name here