ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.17 ಮತ್ತು 18ರಂದು ಹಾಗೂ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆ ರೆಡ್ ಅಲರ್ಟ್ ನೀಡಲಾಗಿದೆ.