Home ಕರಾವಳಿ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿ ASI ಸುಂದರ ಕಾನಾವು ನಿಧನ..!

ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿ ASI ಸುಂದರ ಕಾನಾವು ನಿಧನ..!

0

ಪುತ್ತೂರು :  ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು  ಸೋಮವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಪೆರುವಾಜೆ ಗ್ರಾಮದ ಕಾನಾವು ನಿವಾಸಿಯಾಗಿರುವ ಸುಂದರ ಕಾನಾವು ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.

LEAVE A REPLY

Please enter your comment!
Please enter your name here