ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ಗೆ ಆಗಮಿಸಿದರು.
ಕೆನೆ ಬಣ್ಣದ ಸೀರೆ ತೊಟ್ಟಿರುವ ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದರು
ಈ ಬಜೆಟ್ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ವ್ಯಾಪಕ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.