ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಪ್ರಸಾದ್(42) ಎಂದು ಗುರುತಿಸಲಾಗಿದೆ. ಈತನನ್ನು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.