ಪುತ್ತೂರು: ಸ್ನಾನಕ್ಕೆಂದು ಕೆರೆಗೆ ತೆರಳಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಳ್ಳೇರಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬುಳ್ಳೇರಿಕಟ್ಟೆ ನಿವಾಸಿ ಜಗನ್ಮೋಹನ್ ರೈ ಅಗರ್ತಬೈಲು (58) ಎಂದು ಗುರುತಿಸಲಾಗಿದೆ. ಇವರು ಈಜಲೆಂದು ಕೆರೆಗೆ ಇಳಿದಿದ್ದು, ಕೆಸರಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಮೃತದೇಹವನ್ನು ಮೇಲೆತ್ತುವ ಕಾರ್ಯದಲ್ಲಿ ನಿರತರಾಗಿದ್ದಾರೆ.