Home ತಾಜಾ ಸುದ್ದಿ ವಯನಾಡು ಭಾರಿ ಭೂಕುಸಿತ: ಸಾವಿನ ಸಂಖ್ಯೆ 36ಕ್ಕೆ ಏರಿಕೆ – ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ

ವಯನಾಡು ಭಾರಿ ಭೂಕುಸಿತ: ಸಾವಿನ ಸಂಖ್ಯೆ 36ಕ್ಕೆ ಏರಿಕೆ – ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ

0

ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಮೂವರು ಮಕ್ಕಳು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ.

150ಕ್ಕೂ ಹೆಚ್ಚು ಜನರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಮೃತರಲ್ಲಿ ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಸಾವನ್ನಪ್ಪಿದೆ. ಅಷ್ಟೇ ಅಲ್ಲದೆ ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಮತ್ತು ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಮತ್ತು ಸಂಪರ್ಕ ಕಡಿತಗೊಂಡಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಮತ್ತು ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ ಆರ್ ಹೇಳಿದ್ದಾರೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು (9656938689 ಮತ್ತು 8086010833) ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here