Home ಕರಾವಳಿ ಭಾರಿ ಮಳೆ: ಜಿಲ್ಲೆಯ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ಭಾರಿ ಮಳೆ: ಜಿಲ್ಲೆಯ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

0

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಿಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಿದ್ದಾರೆ.

ತುರ್ತು ಸಂದರ್ಭವನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿರುವಂತೆ ಜಿಲ್ಲಾ ಅಧಿಕಾರಿಗಳಿಗೆ ಸಂಸದರು ಸೂಚನೆಯನ್ನು ನೀಡಿರುತ್ತಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿ ಹಾಗೂ ಹವಾಮಾನ ಮಾಹಿತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಂಸದರು ವಿನಂತಿಸಿದ್ದಾರೆ.

ಜಾಗೃತರಾಗಿರಿ, ಸುರಕ್ಷಿತವಾಗಿರಿ.

LEAVE A REPLY

Please enter your comment!
Please enter your name here