Home ಕರಾವಳಿ ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರ ಬಂಧನ..!

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರ ಬಂಧನ..!

0
ಬಂಟ್ವಾಳ ಸಮೀಪ ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳನ್ನು ಪುಸಲಾಯಿಸಿ ಭಿನ್ನ ಕೋಮಿನ ಯುವಕರು ಪಾರ್ಕ್‌ವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಫೈಜಲ್‌ ಹಾಗೂ ಲಿಕೇಶ್‌ ಬಂಧಿತ ಆರೋಪಿಗಳಾಗಿದ್ದು, ಅಫೀಕ್‌ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಾಲಕಿಯನ್ನು ಪಾರ್ಕಿಗೆ ಬರುವಂತೆ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here