ಬೆಂಗಳೂರು:- ಅಶ್ಲೀಲ ಮೆಸೇಜ್ ನಿಂದ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.
31 ವರ್ಷದ ಮಮತಾ ನೇಣಿಗೆ ಶರಣಾದ ರ್ದುದೈವಿ ಎನ್ನಲಾಗಿದೆ. ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬುವವರು ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ