Home ಕರಾವಳಿ ಮಂಗಳೂರು: ಲವ್ ಜಿಹಾದ್- ಹಿಂದೂ ವಿದ್ಯಾರ್ಥಿನಿಯ ಮತಾಂತರ ಮಾಡಿ ವಿವಾಹವಾದ ಕೇರಳದ ನಟೋರಿಯಸ್ ಕ್ರಿಮಿನಲ್

ಮಂಗಳೂರು: ಲವ್ ಜಿಹಾದ್- ಹಿಂದೂ ವಿದ್ಯಾರ್ಥಿನಿಯ ಮತಾಂತರ ಮಾಡಿ ವಿವಾಹವಾದ ಕೇರಳದ ನಟೋರಿಯಸ್ ಕ್ರಿಮಿನಲ್

0

ಮಂಗಳೂರು : ಕೇರಳದ ನಟೋರಿಯಸ್ ಕ್ರಿಮಿನಲ್ ವಿರುದ್ಧ ಲವ್‌ಜಿಹಾದ್ ಆರೋಪ ಪ್ರಕರಣ ತಿರುವು ಪಡೆದಿದ್ದು, ಇದೀಗ ಆತ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹವಾಗಿದ್ದಾನೆ. ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯಾಳನ್ನು ಅಶ್ಫಕ್ ಎಂಬ ನಟೋರಿಯಸ್ ಕ್ರಿಮಿನಲ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಕೇವಲ ಎರಡೇ ತಿಂಗಳಲ್ಲಿ ಆತ ಪ್ರೀತಿಯ ಖೆಡ್ಡಾಕ್ಕೆ ಬೀಳಿಸಿದ್ದ ಎಂದು ಆರೋಪಿಸಲಾಗಿದೆ.

ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿದ್ದುಕೊಂಡು ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಾಳನ್ನು ಜೂ.6ರಂದು ಅಲ್ಲಿಂದಲೇ ಕರೆದುಕೊಂಡು ಹೋಗಿದ್ದ ಅಶ್ಫಾಕ್.‌ ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಆಕೆಯನ್ನು ಪತ್ತೆಹಚ್ಚಿ ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿರಿಸಿದ್ದರು. ಆದರೆ ಅಶ್ಫಾಕ್‌ನೊಂದಿಗೆ ತೆರಳುವುದಾಗಿ ಹೇಳ್ತಿದ್ದಳು. ಕೇರಳದಲ್ಲಿ ವಿಸ್ಮಯ ಮತಾಂತರ ನಡೆಸಿರುವುದಾಗಿ ಆಕೆಯ ತಂದೆ ಆರೋಪಿಸಿದ್ದರು. ಬಳಿಕ ಮಂಗಳೂರಿನ ವಿಎಚ್‌ಪಿ ನಾಯಕರನ್ನು ಭೇಟಿಯಾಗಿ ವಿಸ್ಮಯಾ ತಂದೆ ಮಗಳನ್ನು ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದರು. ಕೊನೆಗೂ ಆಕೆ ತಂದೆಯ ಕೈಗೆ ಸಿಗದೇ ಅಶ್ಫಾಕ್‌ನನ್ನು ವಿಸ್ಮಯಾ ಮುಸ್ಲಿಂ ಪದ್ಧತಿ ಪ್ರಕಾರ ವಿವಾಹವಾಗಿದ್ದಾಳೆ. ಅಶ್ಫಾಕ್ ಕೇರಳ ಹೈಕೋರ್ಟ್‌ಗೆ ಹೆಬಿಯಾಸ್ ಕಾರ್ಪಸ್ ಅರ್ಜಿ ಹಾಕಿದ್ದ. ಇದೀಗ ಕೇರಳ ಹೈಕೋರ್ಟ್ ಆದೇಶದಂತೆ ವಿಸ್ಮಯಾಳನ್ನು ಮದುವೆಯಾಗಿದ್ದಾನೆ. ಇದೀಗ ಆಕೆ ಮದುವೆಯಾಗಿರುವ ಫೋಟೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿರುವ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು, ‘ಕ್ಷಮಿಸಿ ವಿನೋದ್‌ರವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ವಿಸ್ಮಯಾಟ ತಂದೆಯ ಬಳಿ ಕ್ಷಮೆ ಕೋರಿದ್ದಾರೆ‌.

LEAVE A REPLY

Please enter your comment!
Please enter your name here