Home ದಕ್ಷಿಣ ಕನ್ನಡ ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ವಿವೇಕ ಜಾಗೃತಿ – ಉಪನ್ಯಾಸ ಕಾರ್ಯಕ್ರಮ

ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ವಿವೇಕ ಜಾಗೃತಿ – ಉಪನ್ಯಾಸ ಕಾರ್ಯಕ್ರಮ

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ, ಮಂಗಳಗಂಗೋತ್ರಿ, ಮಂಗಳೂರು ಮತ್ತು ರಾಮಕೃಷ್ಣ ಮಿಷನ್‌, ಮಂಗಳೂರು ಜಂಟಿ ಆಶ್ರಯದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯ, ವಿವೇಕಾನಂದ ಆವರಣ, ನೆಹರು ನಗರ, ಪುತ್ತೂರು ಇದರ ಸಹಯೋಗದೊಂದಿಗೆ “ವಿವೇಕ ಜಾಗೃತಿ” ಎಂಬ ಶೀರ್ಷಿಕೆಯೊಂದಿಗೆ ಉಪನ್ಯಾಸ ಕಾರ್ಯಕ್ರಮ 14 ಆಗಸ್ಟ್‌ 2024 ರಂದು ಮಧ್ಯಾಹ್ನ 2 ಗಂಟೆಗೆ ಪುತ್ತೂರಿನ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ.


 

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಸ್ವಾಮಿ ಮಹಾಮೇಧಾನಂದಜಿ ಭಾಗವಹಿಸಿ “ನನ್ನ ಏಳಿಗೆಗೆ ನಾನೇ ಶಿಲ್ಪಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಸತೀಶ್‌ ರಾವ್‌ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್‌ ರಾವ್‌, ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ., ಪ್ರಾಂಶುಪಾಲರಾದ ಮಹೇಶ ನಿಟಿಲಾಪುರ ಉಪಸ್ಥಿತರಿರಲಿದ್ದಾರೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

LEAVE A REPLY

Please enter your comment!
Please enter your name here