Home ಉಡುಪಿ ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು!

ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು!

0

ಉಡುಪಿ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡಿದ್ದ ಕಾರು ಚಾಲಕ ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್‌ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ದಿನಾಂಕ ಆಗಸ್ಟ್ 14ರಂದು ರಾತ್ರಿ‌ ಮಲಗಿಕೊಂಡಿದ್ದು, ರಾತ್ರಿ 10:30 ಗಂಟೆಯಿಂದ ದಿನಾಂಕ ಆಗಸ್ಟ್ 15 ಬೆಳಿಗ್ಗೆ 06 ಗಂಟೆಯ ನಡುವಿನ ಅವಧಿಯಲ್ಲಿ ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


LEAVE A REPLY

Please enter your comment!
Please enter your name here