ಬ್ರಹ್ಮಾವರ: ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ್ದಾರೆ. ಮಣಿಪಾಲದ ಹಣಕಾಸು ಸಂಸ್ಥೆಯೊಂದರಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ ಬೆಲೆಗೆ ನೀಡುವುದಾಗಿ ಇವರು ನಿತ್ಯಾನಂದ (64) ಹಾಗೂ ಇತರರನ್ನು ನಂಬಿಸಿ 2023ರ ಡಿ.11ರಿಂದ 2024ರ ಜು.16ರವರೆಗೆ ಈ ಹಣವನ್ನು ಪಡೆದಿದ್ದರು ಎನ್ನಲಾಗಿದೆ. ಆದರೆ ಇದುವರೆಗೂ ಅವರು ಹೇಳಿದ ಚಿನ್ನವನ್ನು ನೀಡದೇ, ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ಮತ್ತು ಹಣವನ್ನು ವಾಪಾಸು ಕೇಳಿದ್ದಕ್ಕೆ ಆರೋಪಿಗಳು ಬೆದರಿಕೆ ಹಾಕಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Home ತಾಜಾ ಸುದ್ದಿ ಬ್ರಹ್ಮಾವರ: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಹಲವರಿಗೆ 75 ಲಕ್ಷ ರೂ. ವಂಚನೆ- ಪ್ರಕರಣ...