ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ಯಕೋಮಿನ ಯುವಕ ಹಿಂದೂ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಇದು ಪೂರ್ವನಿಯೋಜಿತ ಕೃತ್ಯ. ಯುವತಿಯರು ಇಂತಹ ಘಟನೆಗಳ ಬಗ್ಗೆ ಎಚ್ಚರದಿಂದ ಇರಬೇಕು. ಹಿಂದೂ ಯುವತಿಯರು ಆಸೆ, ಆಮಿಷಗಳಿಗೆ ಒಳಗಾಗಬಾರದು. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರವು ಲವ್ ಜಿಹಾದ್ ನಂತಹ ಪ್ರಕರಣಗಳ ಬಗ್ಗೆ ಸರ್ಕಾರ ಎಚ್ಚರವಹಿಸಬೇಕು. ಇಂತಹ ಕೃತ್ಯ ತಡೆಗಟ್ಟಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.