Home ಕರಾವಳಿ ಮಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ವಿದ್ಯಾರ್ಥಿಗಳಿಗೆ 5 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ

ಮಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ವಿದ್ಯಾರ್ಥಿಗಳಿಗೆ 5 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ

0

ಮಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಸಾಲ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್‌, ಆರ್ಕಿಟೆಕ್ಟರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ, ಎಂಬಿಎ, ಎಂಸಿಎ, ಎಲ್‌ಎಲ್‌ಬಿ ಕೋರ್ಸ್‌ಗಳಿಗೆ 50 ಸಾವಿರ ರೂ.ನಿಂದ 5 ಲಕ್ಷ ರೂ. ತನಕ ನೀಡಲಾಗುವುದು. ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12ರಷ್ಟು ಆನ್‌ಲೈನ್‌ ಮೂಲಕ ಮರು ಪಾವತಿಸಬೇಕಾಗಿರುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹಿಂದೆ ಆಯ್ಕೆಯಾಗಿ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನ. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಬಾಂಡ್ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೌಲಾನಾ ಆಜಾದ್ ಭವನ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು- 575001 ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


 

LEAVE A REPLY

Please enter your comment!
Please enter your name here