Home ಕರಾವಳಿ ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಕಾಸರಗೋಡಿನ ಇಬ್ಬರು ಸಿಸಿಬಿ ಬಲೆಗೆ

ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಕಾಸರಗೋಡಿನ ಇಬ್ಬರು ಸಿಸಿಬಿ ಬಲೆಗೆ

0

ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ (30), ಸೂರಜ್ ರೈ(26) ಬಂಧಿತ ಆರೋಪಿಗಳು. ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಸಾಗಿಸುತ್ತಿದ್ದರು. ಇಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಕೆ.ಸಿ.ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 75 ಸಾವಿರ ಮೌಲ್ಯದ 15 ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕಮಾಪಕ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,65,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here