Home ಉಡುಪಿ ಉಡುಪಿ: ಪಡುಕೆರೆ ಬೀಚ್​ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌- ಪೊಲೀಸರ ಅಡ್ಡಿಗೆ ಯುವತಿಯ ಆಕ್ಷೇಪ

ಉಡುಪಿ: ಪಡುಕೆರೆ ಬೀಚ್​ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌- ಪೊಲೀಸರ ಅಡ್ಡಿಗೆ ಯುವತಿಯ ಆಕ್ಷೇಪ

0

ಉಡುಪಿ : ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬರು ಬಿಕಿನಿ ಫೋಟೋಶೂಟ್ ಮಾಡಿಸಿಕೊಳ್ಳುವ ವೇಳೆ ಪೊಲೀಸರು ತಡೆದ ಘಟನೆ ನಡೆದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಯುವತಿ, ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಎಚ್ಚರಿಕೆ ನೀಡುವಂತೆಯೂ ತಿಳಿಸಿದ್ದರು ಎನ್ನಲಾಗಿದೆ.

ಸಂಭಾವ್ಯ ಸಮಸ್ಯೆಯ ಬಗ್ಗೆ ಅರಿತುಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಬಟ್ಟೆ ಬದಲಾಯಿಸುವಂತೆ ಸೂಚಿಸಿದ್ದರು. ಈ ವಿಚಾರವಾಗಿ ಇನ್‌ಸ್ಟಾಗ್ರಾಂನಲ್ಲಿ ಫೋಟೋಶೂಟ್ ಮಾಡಿದ ಫೋಟೋ ಸಹಿತ ಮಾಹಿತಿ ನೀಡಿರುವ ಯುವತಿ, ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವ ಹಂಚಿಕೊಂಡಿದ್ದಾರೆ. ಫೋಟೋಶೂಟ್ ಮಾಡಿಸುತ್ತಿದ್ದಾಗ ಬಟ್ಟೆ ಬದಲಿಸುವಂತೆ ಸ್ಥಳೀಯ ಪೊಲೀಸರು ಸೂಚಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರೆಂದು ಯುವತಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here