ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ರಾಜ್ಯಾದ್ಯಂತ ಆದೇಶ ಹೊರಡಿಸಲಾಗುವುದು.
ವೈದ್ಯರಿಗೆ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಬರದಿದ್ದರೆ, ಪ್ರಾಧಿಕಾರಿಂದ ಕಲಿಕಾ ಕೇಂದ್ರ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ಆದೇಶ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಂದು ಕಡೆ ಶುರುವಾದರೆ ತನ್ನಷ್ಟಕ್ಕೆ ವಿಸ್ತರಣೆಯಾಗುತ್ತದೆ ಎಂದು ತಿಳಿಸಿದ್ದಾರೆ