ಗೃಹಲಕ್ಷ್ಮಿ ಯೋಜನೆ ಜೂನ್ ತಿಂಗಳ ಹಣ ಬಿಡುಗಡೆಯಾಗಿದ್ದು, ಕೆಲವರಿಗೆ ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಶೀಘ್ರವೇ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.



ಸುದ್ದಿಗಾರರೊಂದಿಗೆ ಮಾತಾನಾಡಿರುವ ಲಕ್ಷ್ಮಿ ಹೆಬ್ಬಾಳ್ಕಾರ್ ಹಣವನ್ನ ಬಿಡುಗಡೆ ಮಾಡಿದ್ದೇವೆ. ಕೆಲವೊಬ್ಬರಿಗೆ ಹಣ ಬಂದಿದೆ. ಕೆಲವೊಬ್ಬರಿಗೆ ಹಣ ಬಂದಿಲ್ಲ. ಸದ್ಯ ಎಲ್ಲಾ ಖಾತೆಗಳಿಗೂ ಹಣ ಹಾಕಲು ಎಲ್ಲಾ ಪ್ರಕ್ರಿಯೆಗಳನ್ನ ಮಾಡಲಾಗುತ್ತಿದೆ. ಸದ್ಯ ಒಂದು ತಿಂಗಳ ಹಣವನ್ನ ಹಾಕಿದ್ದೇವೆ. ಶೀಘ್ರವೇ 2 ತಿಂಗಳ ಹಣವನ್ನು ಒಟ್ಟಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ 15 ದಿನಗಳಿಂದ ಆರಂಭವಾಗಿದ್ದು, ಇನ್ನು 15 ದಿನಗಳಲ್ಲಿ ಎಲ್ಲರ ಖಾತೆಗೆ ಹಣ ಜಮಾವಣೆಯಾಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.