Home ಕರಾವಳಿ ಮಂಗಳೂರು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸುನೀಲ್ ನಿಧನ

ಮಂಗಳೂರು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸುನೀಲ್ ನಿಧನ

0

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್‌ ಟೇಬಲ್  ಸುನೀಲ್ (50) ಅವರು  ಅಲ್ಪ ಕಾಲದ ಅಸೌಖ್ಯದಿಂದ  ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕರಿಯಾಗದೇ ನಗರ  ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನವರಾದ ಸುನೀಲ್ ಅವರು 1996 ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು ಬಳಿಕ ಉಡುಪಿ ಹಾಗೂ  ಮಂಗಳೂರಿನ ವಿವಿಧ ಠಾಣೆಗಳಲ್ಲಿ  ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.  ಸುನೀಲ್ ಅವರ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here