ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು (ಸೆ.14)ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ.ಬ್ರಿಜೇಶ್ ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯೂ ಪ್ರಕಟಣೆಯಲ್ಲಿ ತಿಳಿಸಿದೆ.