ಮಂಗಳೂರು: ಕನ್ನಡದ ಹೊಸ ಸಿನಿಮಾ ಕಲ್ಜಿಗ ಸಿನಿಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ. ಸಿನಿಮಾ ನೋಡಿದವರು ನಮ್ಮ ತುಳುನಾಡಿನ ದೈವಗಳ ಕಾರಣಿಕವನ್ನು ಚೆನ್ನಾಗಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಕಾರ ಸಿನಿಮಾದಲ್ಲಿ ದೈವಾರಾಧನೆಗೆ ಎಲ್ಲೂ ಅಪಚಾರ ಆಗಿರಲಿಕ್ಕಿಲ್ಲ. ನಾವು ತಪ್ಪು ಮಾಡದೆಯೂ ನಮಗೆ ಅನ್ಯಾಯವಾಗುವುದಾದರೆ ನಾನು ಚಿತ್ರತಂಡದ ಜೊತೆಗೆ ಇದ್ದೇನೆ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಹೇಳಿದ್ದಾರೆ. ಅವರು ಇಂದು “ಕಲ್ಜಿಗ’ ಸಿನಿಮಾ ಮಂಗಳೂರಿನ ಬಿಜೈನಲ್ಲಿರೋ ಭಾರತ್ ಮಾಲ್‌ನ ಭಾರತ್ ಸಿನಿಮಾಸ್‌ನಲ್ಲಿ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ರು.


