Home ಕರಾವಳಿ ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ

0

ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ.

ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ಇಂದು ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ ಮಹತ್ವವಿದೆ. ಹೀಗಾಗಿ ನಾವೆಲ್ಲರೂ ಸ್ವಚ್ಚತೆ ಸೇವೆಯನ್ನು ವ್ರತದಂತೆ ಸ್ವೀಕರಿಸಬೇಕು. ಇದು ಒಂದು ದಿನದ ಅಭಿಯಾನಕ್ಕೆ ಮಾತ್ರ ಸೀಮಿತವಾಗಬಾರದು. ಯಾವುದೋ ಒಂದು ಸಂಸ್ಥೆ ಅಥವಾ ವ್ಯವಸ್ಥೆ ಭಾಗವಾಗಿದ್ದಾಗ ನಾವು ಸ್ವಚ್ಚತೆಯನ್ನು ಸೇವೆ ರೂಪದಲ್ಲಿ ಮಾಡುವುದನ್ನು ವೈಯಕ್ತಿಕವಾಗಿಯೂ ಹೆಚ್ಚು ಬದ್ಧತೆಯಿಂದ ಮಾಡಬೇಕು ಎಂದು ಅವರು ಹೇಳಿದ್ದಾರೆ.

10 ವರ್ಷಗಳ ಹಿಂದೆ 2014ರ ಅ.2ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ್ದ ಸ್ವಚ್ಛ ಭಾರತ ಅಭಿಯಾನವನ್ನು ಸೇವೆ ರೂಪದಲ್ಲಿ ಮಾಡಬೇಕು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

ಶಾಸಕರಾದ ಉಮಾನಾಥ ಕೋಟ್ಯಾನ್, ಸೀನಿಯರ್ ಕಮಾಂಡೆಂಟ್ ವೀರೇಂದ್ರ ಮೋಹನ್, ಡೆಪ್ಯೂಟಿ ಕಮಾಂಡೆಂಟ್ ಎಸ್ ಎಮ್ ಮೈಟೈ, ಸನತ್ ಕುಮಾರ್ ಶೆಟ್ಟಿ, ಭದ್ರತಾ ಸಿಬ್ಬಂದಿಗಳು ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here