Home ತಾಜಾ ಸುದ್ದಿ ಒಂದು ರಾಷ್ಟ್ರ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಒಂದು ರಾಷ್ಟ್ರ, ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

0

ನವದೆಹಲಿ : ಒಂದು ದೇಶ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಮ್‌ ನಾಥ್‌ ಕೋವಿಂದ್‌ ಸಮಿತಿಯ ವರದಿಗೆ ಸಂಪುಟ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಹೌದು ಇಂದು ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಈ ಮಸೂದೆಗೆ ಒಪ್ಪಿಗೆ ನೀಡಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ವರ್ಷದ ಮಾರ್ಚ್‌ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. 191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಯನ್ನು ಸಂಗ್ರಹಿಸಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಇದು ಕಾನೂನಾದರೆ, 100 ದಿನಗಳ ಅವಧಿಯಲ್ಲಿ ಲೋಕಸಭೆ,ವಿಧಾನಸಭೆ ಮತ್ತು ಸ್ಥಳೀಯ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಬೇಕಾಗುತ್ತದೆ. ಇದು ಸಾರ್ವಜನಿಕ ಹಣವನ್ನು ಉಳಿಸುತ್ತದೆ. ಮತ್ತು ಸರ್ಕಾರಗಳು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.


LEAVE A REPLY

Please enter your comment!
Please enter your name here