Home ತಾಜಾ ಸುದ್ದಿ BREAKING : ಮುಡಾ ಹಗರಣದಲ್ಲಿ CM ಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ...

BREAKING : ಮುಡಾ ಹಗರಣದಲ್ಲಿ CM ಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾ!

0

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ.


ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.

ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಿದ್ದು,. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಇಂದು ಪ್ರಕಟಿಸಿದೆ.

LEAVE A REPLY

Please enter your comment!
Please enter your name here