ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಹಿನ್ನಡೆ ಉಂಟಾಗಿದೆ. ಜನಪ್ರತಿನಿಧಿಗಳ ಕೋರ್ಟ್ ನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಮೈಸೂರು ಲೋಕಾಯುಕ್ತರಿಂದ ತನಿಖೆಗೆ ಆದೇಶಿಸಿದ್ದು, 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ಕೋರ್ಟ್ ಆದೇಶಿಸಿದೆ. ಮುಡಾ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರುಗಳ ಬಗ್ಗೆ ಇಂದು ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಮುಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ತನಿಖೆಗೆ ಆದೇಶಿಸಿದೆ.
Home ತಾಜಾ ಸುದ್ದಿ CM ಸಿದ್ದರಾಮಯ್ಯ’ಗೆ ಬಿಗ್ ಶಾಕ್ : 3 ತಿಂಗಳಲ್ಲಿ ಮುಡಾಹಗರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ...