ಮಂಗಳೂರು :ರಾಷ್ಟ್ರೀಯ ಹೆದ್ದಾರಿ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಬಳಿ ಬಿಎಂಡಬ್ಲ್ಯು ಕಾರು ಶನಿವಾರ ಹಠಾತ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಈ ಕಾರು ದೆಹಲಿ ನೋಂದಾಯಿತವಾಗಿತ್ತು ಎಂಜಿನ್ನಲ್ಲಿ ದೋಷ ಕಾಣಿಸಿಕೊಂಡು, ಬೆಂಕಿ ಹೊತ್ತಿಕೊಂಡಿತು. ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕೆಲ ಹೊತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.


