Home ಕರಾವಳಿ ಮಂಗಳೂರು: ವಾಹನ ಅಪಘಾತ ಪ್ರಕರಣ-ಮೃತ ವ್ಯಕ್ತಿಯ ಕುಟುಂಬಕ್ಕೆ 1.35 ಕೋ.ರೂ. ಪರಿಹಾರ ನೀಡಲು ಆದೇಶ

ಮಂಗಳೂರು: ವಾಹನ ಅಪಘಾತ ಪ್ರಕರಣ-ಮೃತ ವ್ಯಕ್ತಿಯ ಕುಟುಂಬಕ್ಕೆ 1.35 ಕೋ.ರೂ. ಪರಿಹಾರ ನೀಡಲು ಆದೇಶ

0

ಮಂಗಳೂರು:ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.35 ಕೋಟಿ ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ವಿಮಾ ಕಂಪೆನಿಗೆ ಆದೇಶಿಸಿದ್ದಾರೆ. ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ನಗರದ ಕೊಟ್ಟಾರ ಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಹೇಶ್ ಭಟ್ ಮೃತಪಟ್ಟಿದ್ದರು. ಅದರಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯ‌ರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ಕಾಯ್ದೆಯಡಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಮಾ ಸಂಸ್ಥೆಯಾದ ಯುನಿವರ್ಸಲ್ ಸೊಂಪೋ ಜನರಲ್ ಇನ್ಸೂರೆನ್ಸ್ ಕಂಪೆನಿಯು 1.6 ಕೋಟಿ ರೂ. ಪರಿಹಾರವನ್ನು ಶೇ.6ರಷ್ಟು ಬಡ್ಡಿ ಸಹಿತ 1.35 ಕೋ.ರೂ.ಗಳ ಪರಿಹಾರವನ್ನು ಅರ್ಜಿದಾರರಿಗೆ ನೀಡಲು ಆದೇಶ ನೀಡಿದೆ. ಪರಿಹಾರ ಧನ ಪಡೆಯಲು ಮೃತರ ಪತ್ನಿ, ಅವರ ಪುತ್ರ ಹಾಗೂ ಮೃತರ ಹೆತ್ತವರು ಅರ್ಹರಾಗಿ ದ್ದಾರೆಂದು ನ್ಯಾಯಾಲಯವು ತಿಳಿಸಿದೆ. ಅರ್ಜಿದಾರರ ಪರವಾಗಿ ವಕೀಲರಾದ ಎ. ದಿನೇಶ್ ಭಂಡಾರಿ, ಕೆ.ಎಸ್.ಎನ್.ಅಡಿಗ, ಪ್ರೀತಿಕಾ ಕೆ.ಎಂ., ತೃಪ್ತಿ ವಾದಿಸಿದ್ದರು.

LEAVE A REPLY

Please enter your comment!
Please enter your name here