Home ಕರಾವಳಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಪ್ರಜೆಯ ಬಂಧನ..!

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಪ್ರಜೆಯ ಬಂಧನ..!

0

ಮಂಗಳೂರು :ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಗೆ ತೆರಳುವ ವೇಳೆ ಬಾಂಗ್ಲಾ ಪ್ರಜೆ ಮಹಮ್ಮದ್ ಮಾಣಿಕ್‌ ಎಂಬಾತ ಬಂಧಿತನಾಗಿದ್ದು, ಆತನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


ಆತನ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಕಸ್ಟಡಿಗೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ ಮಹಮ್ಮದ್ ಮಾಣಿಕ್ ಭಾರತೀಯ ಪಾಸ್ ಪೊರ್ಟ್ ಹಾಗೂ ಇತರೆ ದಾಖಲಾತಿಗಳನ್ನು ಹಾಜರುಪಡಿಸಿದ್ದಾನೆ. ಈ ವೇಳೆ ಆತ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆ ಮಾಣಿಕ್‌ಚೌಕ್‌ನ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬಾಂಗ್ಲದೇಶದ ರಾಷ್ಟ್ರೀಯ ಗುರುತು ಚೀಟಿ ಸಂಖ್ಯೆ 601 ಆಗಿದ್ದು ಈತನು 2017 ರಲ್ಲಿ ಇಂಡೋ -ಬಾಂಗ್ಲ ಅಂತರಾಷ್ಟ್ರೀಯ ಗಡೀರೇಖೆ ಪಶ್ಚಿಮ ಬಂಗಾಳದ ಮುರ್ಷಿದಬಾದ್ ಜಿಲ್ಲೆಯ ಲಾಲ್‌ಗೊಲ್ ಮುಖೇನ ಭಾರತಕ್ಕೆ ಬಂದಿದ್ದ ಎಂದು ಹೇಳಲಾಗಿದೆ. ಶೆಲ್ಲಾ-ಹೌರ-ಚೆನ್ನೈ ಮುಖಾಂತರ ಮಂಗಳೂರು ಮೂಡಬಿದರೆ ಮೂಲಕ ಉಡುಪಿಗೆ ಬಂದಿದ್ದ ಎಂದು ತಿಳಿದು ಬಂದಿದೆ. ಉಡುಪಿಯಲ್ಲಿ ಪರ್ವೆಜ್ ಎಂಬಾತನ ಮುಖಾಂತರ ಪಾಸ್‌ಪೋರ್ಟ್ ಮಾಡಿಸಿರುವುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ.

LEAVE A REPLY

Please enter your comment!
Please enter your name here