ಬೆಳ್ತಂಗಡಿ: ಅ. 13ರಂದು ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ್ ಪೂಜಾರಿ ಎಂಬವರ ಪತ್ನಿ ಶ್ರೀಮತಿ ಮಮತಾ ಪೂಜಾರಿ (45) ಆತ್ಮಹತ್ಯೆ ಮಾಡಿಕೊಂಡವರು.
ಇವರು ಅ. 13ರಂದು ಬೆಳಿಗ್ಗೆ ಮನೆಯಿಂದ ಹೋಗಿದ್ದರು. ಆದರೆ ತುಂಬಾ ಹೊತ್ತಾದರೂ ಮನೆಗೆ ಬಾರದಿದ್ದಾಗ ಮನೆಮಂದಿ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ, ನಿರಂತರ ಹುಡುಕಾಟದ ಬಳಿಕ ನಿನ್ನೆ ಅ. 14ರಂದು ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಕಂಡು ಬಂದಿದೆ.
ಸ್ಥಳಕ್ಕಾಗಮಿಸಿದ ವೇಣೂರು ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರ ಪತಿ ಪಾರ್ಶ್ಶ್ವವಾಯು ರೋಗ ದಿಂದ ಬಳಲುತ್ತಿದ್ದು, ಇಬ್ಬರು ಪುತ್ರರು ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ.