Home ತಾಜಾ ಸುದ್ದಿ ಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ- ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ- ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಿದೆ.


ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರ ಮರಿಗೌಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ಕೆ ಮರಿಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಗರದ ಆಯಕಟ್ಟಿನ ಸ್ಥಳದಲ್ಲಿ 14 ನಿವೇಶನ ಮಂಜೂರಾದ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಲ ಭೂಮಾಲೀಕನ ವಿರುದ್ಧ ಎಫ್ಐಆರ್‌ ದಾಖಲಾಗಿರುವುದಲ್ಲದೇ ತನಿಖೆಯೂ ನಡೆಯುತ್ತಿದೆ.

LEAVE A REPLY

Please enter your comment!
Please enter your name here