Home ಕರಾವಳಿ ಸುಳ್ಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ

ಸುಳ್ಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ

0

ಸುಳ್ಯ :ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ.


ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ ಮೇಲೆ ಮೂವರು ಹೋಗುತ್ತಿದ್ದ ವೇಳೆ ರೋಪ್ ತುಂಡಾಗಿದೆ.

ಪರಿಣಾಮ ಕುಸುಮಾಧರ ಉಳುವಾರು ಅವರ ಕೈಗೆ ಗಂಭೀರ ಏಟು ತಗುಲಿದರೆ ತೇಜಕುಮಾರ್ ಅವರು ರೋಪ್ ನಲ್ಲಿ ನೇತಾಡಿಕೊಂಡು ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಚಂದ್ರಶೇಖರ ಅವರು ಗಾಯಗೊಂಡಿದ್ದಾರೆ. ಮೂವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here