Home ತಾಜಾ ಸುದ್ದಿ ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ...

‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ

0

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ.


ಅದು ಕೂಡ ಮುಡಾದಲ್ಲೇ ಆಗಿರುವಂಥದ್ದು ಎಂದು ಹೇಳಲಾಗುತ್ತಿದೆ.

ಹೌದು ಮುಡಾದಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಭೂ ಅಕ್ರಮ ಮಾಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ಗಂಭೀರವಾದಂತಹ ಆರೋಪ ಮಾಡಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 7 ಗುಂಟೆ ಜಾಗವನ್ನು 2023 ರಲ್ಲಿ ಸೆಪ್ಟೆಂಬರ್ 29 ರಂದು ರಂದು ಸಿಎಂ ಪತ್ನಿ ಪಾರ್ವತಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್​​ಎಸ್ ರಸ್ತೆಯಲ್ಲಿರುವ‌ ಸರ್ವೇ ನಂಬರ್ 454ರ ಜಾಗ ನೋಂದಾಯಿಸಿಕೊಳ್ಳಲಾಗಿತ್ತು.

ಅಲ್ಲಿ ಗಣೇಶ್ ದೀಕ್ಷಿತ್ ಎಂಬುವವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗವಿತ್ತು. ಅದರಲ್ಲಿ 20 ಗುಂಟೆ ಜಾಗವನ್ನು ಸಿಎಂ ಪತ್ನಿ ಪಾರ್ವತಿ ಖರೀದಿ ಮಾಡಿದ್ದರು. 20 ಗುಂಟೆ ಜಾಗಕ್ಕೆ 1.85 ಕೋಟಿ ರೂಪಾಯಿ ಕೊಟ್ಟು ಖರೀದಿಸಿದ್ದರು. 21,771,99 ಚದರಡಿ ಜಾಗವನ್ನು ನೋಂದಣಿ ಮಾಡಿಸಿಕೊಂಡಿದ್ದರು. ಅದರಲ್ಲಿ 8998 ಚದರಡಿ ಜಾಗವನ್ನು ಗಣೇಶ್ ದೀಕ್ಷಿತ್, ರಸ್ತೆ ಮತ್ತು ಪೈಪ್ ಲೈನ್​​ಗೆಂದು ಮುಡಾಗೆ ಬಿಟ್ಟುಕೊಟ್ಟಿದ್ದರು.

ಮುಡಾಗೆ ಬಿಟ್ಟು ಕೊಟ್ಟ ರಸ್ತೆ ಮತ್ತು ಪೈಪ್ ಲೈನ್​​ಗೆ ಸೇರಿದ್ದ ಜಾಗವನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡು ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ.ಆ ವಿಚಾರವಾಗಿ ಆರ್​ಟಿಐ ಕಾರ್ಯಕರ್ತರು ಅರ್ಜಿ ಹಾಕುತ್ತಿದ್ದಂತೆಯೇ ಎಚ್ಚೆತ್ತ ಸಿಎಂ ಪತ್ನಿ, 30-8-2024 ಹಾಗೂ 31-08-2024 ರಂದು ಮತ್ತೆ ರಿಜಿಸ್ಟರ್ ತಿದ್ದುಪಡಿ ಮಾಡಿಸಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಗಂಭೀರವಾದಂತಹ ಆರೋಪ ಮಾಡಿದ್ದಾರೆ.

LEAVE A REPLY

Please enter your comment!
Please enter your name here