Home ತಾಜಾ ಸುದ್ದಿ ಬೆಂಗಳೂರು ‘ಕಂಬಳಕ್ಕೆ’ ಅನುಮತಿ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ‘ಪೆಟಾ’

ಬೆಂಗಳೂರು ‘ಕಂಬಳಕ್ಕೆ’ ಅನುಮತಿ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ‘ಪೆಟಾ’

0

ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.


 

ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠವು ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ, ಇಷ್ಟು ವಿಳಂಬವೇಕೆ ಎಂದು ಪ್ರಶ್ನಿಸಿತು.

ಇದಕ್ಕೆ ಅರ್ಜಿದಾರರ ಪರ ವಕೀಲರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜುಲೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದಕ್ಕೆ ಇನ್ನು ವಿಚಾರಣೆ ನಿಗದಿಪಡಿಸಿಲ್ಲ.ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದರು. ಬಳಿಕ ಪೀಠ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಗೊಳಿಸಿತು.

LEAVE A REPLY

Please enter your comment!
Please enter your name here