Home ಕರಾವಳಿ ಬಂಟ್ವಾಳ: ತಂಡದಿಂದ ತಲವಾರು ದಾಳಿ- ಇಬ್ಬರಿಗೆ ಗಂಭೀರ..!

ಬಂಟ್ವಾಳ: ತಂಡದಿಂದ ತಲವಾರು ದಾಳಿ- ಇಬ್ಬರಿಗೆ ಗಂಭೀರ..!

0

ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದು ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್‌ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಒಡ್ಡಿದ್ದಾನೆ. ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರಿದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್‌ನ ಬಲ ಕಾಲು, ಮತ್ತೋರ್ವ ಆರೋಪಿ ಮುಸ್ತಾಕನು ಬಲಗೈಗೆ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ. ಈ ವೇಳೆ ತಸ್ಲೀಮ್ ನೆಲಕ್ಕೆ ಬಿದ್ದಾಗ ಮನ್ಸೂರ್ ಮುಖಕ್ಕೆ ಕಡಿದಿದ್ದಾನೆ. ಜೊತೆಗೆ ಆರೋಪಿಗಳು ಮಹಮ್ಮದ್ ಶಾಕೀರ್ ಗೂ ಅದೇ ರೀತಿ ತಲವಾರಿನಿಂದ ಕಡಿದಿದ್ದಾನೆ. ಜೊತೆಗೆ ಆಶ್ರಫ್, ರಿಜ್ವಾನ್ ಮತ್ತು ಲತೀಫ್ ಮರದ ದೊಣ್ಣೆಯಿಂದ ಹೊಡೆದಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರ ವಿರುದ್ಧ ಗಾಯಾಳುಗಳು ಹೇಳಿಕೆ ನೀಡಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here