Home ತಾಜಾ ಸುದ್ದಿ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ

ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ

0

ಬೆಂಗಳೂರು : ಅಂತೂ ಚನ್ನಪಟ್ಟಣ ಉಪಚುನಾವಣೆ ಕ್ಷೇತ್ರಕ್ಕೆ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನ‌ ಕಣಕ್ಕಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ವೈನವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಜೆಡಿಎಸ್ ನಾಯಕರ ಸಮ್ಮುಖದಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರನ್ನ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಮೈತ್ರಿ ಪಕ್ಷಕ್ಕೆ ಸಡ್ಡು ಹೊಡೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಿಪಿ ಯೋಗೇಶ್ವರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿಯ ಪುತ್ರ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಜಿಲ್ಲಾಧ್ಯಕ್ಷ ಜಯಮುತ್ತು ಹೆಸರು ಕೇಳಿಬಂದ್ರು ಸಹ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ಕಾರ್ಯಕರ್ತರು ಒತ್ತಾಡ ಹಾಕಿದ್ರು ಅಂತಿಮವಾಗಿ ನಿಖಿಲ್ ಕುಮಾರಸ್ವಾಮಿಯನ್ನ ಅಭ್ಯರ್ಥಿಯಾಗಿ ಕಣ್ಣಕ್ಕಿಳಿಸಲಿದ್ದಾರೆ. ನಾಳೆ ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ, ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here