ಒಟ್ಟಾವಾ: ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಉಗ್ರರು ಎನ್ನಲಾದ ಗುಂಪೊಂದು ದಾಳಿ ನಡೆಸಿದ್ದು, ಈ ದಾಳಿಯನ್ನು ಪ್ರಧಾನಿ ಜಸ್ಟಿನ್ ಟ್ರುಡೋ ತೀವ್ರವಾಗಿ ಖಂಡಿಸಿದ್ದಾರೆ.
ಖಲಿಸ್ತಾನಿ ಧ್ವಜ ಹಿಡಿದ ಉಗ್ರರು ಎನ್ನಲಾದ ಗುಂಪು ದೇವಸ್ಥಾನಕ್ಕೆ ನುಗ್ಗಿ ಭಕ್ತರ ಮೇಲೆ ದಾಳಿ ನಡೆಸಿದೆ. ಈ ಕುರಿತ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ವೀಡಿಯೋದಲ್ಲಿ ಖಲಿಸ್ತಾನಿ ಧ್ವಜ ಹಿಡಿದ ಗುಂಪು ದೊಣ್ಣೆ ಹಿಡಿದು ಜನರನ್ನು ಹಲ್ಲೆ ಮಾಡುತ್ತಿರುವುದನ್ನು ಕಾಣಬಹುದು. ಈ ಘಟನೆಯನ್ನು ಪ್ರಧಾನಿ ಜಸ್ಟಿನ್ ಟ್ರುಡೋ ದಾಳಿಯನ್ನು ಖಂಡಿಸಿದ್ದಾರೆ.
ಇಂತಹ ಹಿಂಸಾಚಾರ ಕೃತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಿಯನ್ನರು ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ ಎಂದರಲ್ಲದೇ, ಸಮುದಾಯವನ್ನು ರಕ್ಷಿಸಲು ತತ್ವರಿತವಾಗಿ ಸ್ಪಂಧಿಸಿದ ಪೊಲೀಸರಿಗೆ ಧನ್ಯವಾದ ಎಂದು ಜಸ್ಟಿನ್ ಟ್ರುಡೋ ತಿಳಿಸಿದ್ದಾರೆ.