ಮಂಗಳೂರು: ಕೇಂದ್ರದ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 50 ಫಲನುಭವಿಗಳಲಿಗೆ ಕೇಂದ್ರ ತೋಟಗಾರಿಕಾ ಸಂಶೋಧನಾ ಇಲಾಖೆ ವತಿಯಿಂದ ತೆಂಗಿನ ಸಸಿ ವಿತರಿಸಲಾಯಿತು
ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ಇವರು ಸಸಿಯನ್ನು ವಿತರಿಸಿದರು ಈ ವೇಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೊಡಿ ಜತೆಗಿದ್ದರು.
ಸಂಜೀವಿನಿ ಒಕ್ಕೂಟದ ಮುಖಾಂತರ ಸಸಿಯನ್ನು ವಿತರಿಸುವ ಕಾರ್ಯ ನಡೆಯಿತು . ಈ ಸಂಧರ್ಭದಲ್ಲಿ ಪಂಚಾಯತ್ ಕಾರ್ಯದರ್ಶಿ ವಸಂತಿ , ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಸೌಮ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು .