Home ಕರಾವಳಿ ಪ್ರಕಟನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.9, 10ರಂದು ಮತದಾರರ ನೋಂದಣಿ

ಪ್ರಕಟನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.9, 10ರಂದು ಮತದಾರರ ನೋಂದಣಿ

0

ಮಂಗಳೂರು :

ಮಂಗಳೂರು:ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನ.9, 10 ಮತ್ತು 23, 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ನಡೆಯಲಿದೆ. ಎಲ್ಲಾ ಬೂತು ಮಟ್ಟದ ಅಧಿಕಾರಿಗಳು ಹಾಗೂ ಬಿಎಲ್‌ಒ ಮೇಲ್ವಿಚಾರಕರು ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೆ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜನವರಿ 1, ಎಪ್ರಿಲ್ 1, ಜುಲೈ 1, ಅಕ್ಟೋಬರ್ 1) 18 ವರ್ಷ ಪ್ರಾಯ ತುಂಬುವ ಯುವ ಮತದಾರರಿಂದ ನಮೂನೆ-6ನ್ನು ಸ್ವೀಕರಿಸುವರು. ವಲಸೆಹೋದ/ಮೃತಪಟ್ಟ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ನಮೂನೆ 7ನ್ನು ಸ್ವೀಕರಿಸುವರು. ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ನಮೂದುಗಳಲ್ಲಿ ವಿಳಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸುವಿಕೆ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಮತದಾರರ ಚೀಟಿ (ಎಪಿಕ್) ನೀಡುವಿಕೆ ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ಮನವಿ ಹಾಗೂ ಯಾವುದಾದರು ತಿದ್ದುಪಡಿ ಅವಶ್ಯವಿದ್ದಲ್ಲಿ ನಮೂನೆ 8ನ್ನು ಸ್ವೀಕರಿಸುವರು. ಸಾರ್ವಜನಿಕರಿಂದ/ಮತದಾರರಿಂದ ಸ್ವೀಕರಿಸಲ್ಪಟ್ಟ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆ ದಿನ ಸಂಜೆ ಬಿಎಲ್‌ಒ ಕಚೇರಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲು ಸೂಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here