Home ಕರಾವಳಿ ಮಂಗಳೂರು: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು ..!

ಮಂಗಳೂರು: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು ..!

0

ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ.


ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ಗುರುತಿಸಲಾಗಿದೆ.

ಮೂವರು ಗೆಳೆತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದರು. ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು, ಮೂವರೇ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ನಡೆದ ಘಟನೆ. ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತ್ತು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದೆ. ರ ಕ್ಷಣೆಗೆ ಮುಂದಾಗಿದ ಮತ್ತೊಬ್ಬಾಕೆಯೂ ಮುಳುಗಿದ್ದ ಕಾರಣ ಮೂರನೇ ಯುವತಿಯೂ ನೀರಿಗೆ ಇಳಿದಿದ್ದಾಳೆ. ಕೆಲವೇ ನಿಮಿಷದ ಅಂತರದಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಯುವತಿಯರು ಈಜುಕೊಳದ ದಂಡೆಯಲ್ಲಿ ಹೊರ ಉಡುಪುಗಳನ್ನ ಕಳಚಿಟ್ಟಿದ್ದು ಐಪೋನ್ ಒಂದನ್ನ ಈಜು ಕೊಳದ ನೀರಿಗೆ ಗುರಿಯಾಗಿ ರೆಕಾರ್ಡ್ ಇಟ್ಟು ನೀರಾಟಕ್ಕಿಳಿದಿದ್ದಾರೆ. ಯುವತಿಯರಿಗೆ ಈಜು ತಿಳಿಯದೆ ಇರುವುದರಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್ ಸಿಬ್ಬಂದಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಯುವತಿಯರು ನೀರಲ್ಲಿ ಮುಳುಗುತ್ತಿರುವ ಘಟನೆಯ ವೀಡಿಯೋ ಚಿತ್ರಣ ರೆಸಾರ್ಟ್ ಸಿಸಿಟಿವಿಯಲ್ಲಿ ದಾಖಲಾಗಿದೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

LEAVE A REPLY

Please enter your comment!
Please enter your name here