Home ಕರಾವಳಿ ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ..!

0

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯಯೋರ್ವ ವಸತಿ ನಿಲಯದ ಕಿಟಕಿಗಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಗಳೂರು ಸಮೀಪದ ಹೊಸೂರು ನಿವಾಸಿ ಶಶಾಂಕ್ (20) ಎಂದು ಗುರುತಿಸಲಾಗಿದೆ.

ಶಶಾಂಕ್ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾರ್ಥಿಯಾಗಿದ್ದನು. ಈತ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here