Home ಕರಾವಳಿ ಮಂಗಳೂರು: ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ- ಕಾಮುಕ ವೃದ್ಧ ಅರೆಸ್ಟ್..!!

ಮಂಗಳೂರು: ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ- ಕಾಮುಕ ವೃದ್ಧ ಅರೆಸ್ಟ್..!!

0

ಮಂಗಳೂರು: ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕಾಮುಕ ವೃದ್ಧನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿನ ಮೂರು ವರ್ಷದ ಬಾಲಕಿ ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿತ್ತು.

ಈ ವೇಳೆ ಅಂಗಡಿಯ ಮಾಲಕ ಕಾಮುಕ ವೃದ್ಧ ಅಬ್ದುಲ್ಲಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಗು ಅಸ್ವಸ್ಥವಾಗಿರುವುದನ್ನು ಗಮನಿಸಿದ ಬಾಲಕಿಯ ತಾಯಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಬಳಿಕ ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತಕ್ಷಣ ಪೊಲೀಸರು ಕಾಮುಕನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here