Home ತಾಜಾ ಸುದ್ದಿ ರದ್ದಾದ “BPL’ ಕಾರ್ಡ್‌ ಗಳಿಗೆ ರೇಷನ್‌ ಹಂಚಿಕೆ : ಆಹಾರ ಇಲಾಖೆ ಆದೇಶ

ರದ್ದಾದ “BPL’ ಕಾರ್ಡ್‌ ಗಳಿಗೆ ರೇಷನ್‌ ಹಂಚಿಕೆ : ಆಹಾರ ಇಲಾಖೆ ಆದೇಶ

0

ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ. ಖಡಕ್ ಆದೇಶ ಹೊರಡಿಸಿದೆ.
ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ.ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ.
ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ.
ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು.
ಆದೇಶಿಸಿದೆ.

LEAVE A REPLY

Please enter your comment!
Please enter your name here