Home ಕರಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಶಿಶು ಮಾರಾಟವಾಗಿದೆ ಎಂಬ ಮಹಿಳೆಯ ಆರೋಪ- ಸ್ಪಷ್ಟನೆ...

ಸಾಮಾಜಿಕ ಜಾಲತಾಣಗಳಲ್ಲಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಶಿಶು ಮಾರಾಟವಾಗಿದೆ ಎಂಬ ಮಹಿಳೆಯ ಆರೋಪ- ಸ್ಪಷ್ಟನೆ ನೀಡಿದ ಆಸ್ಪತ್ರೆಯ ಆಡಳಿತ ಮಂಡಳಿ

0

ಮಂಗಳೂರು: ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಶಿಶು ಮಾರಾಟವಾಗಿದೆ ಎಂಬ ಮಹಿಳೆಯ ಆರೋಪ ನಿರಾಧಾರ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

2024ರ ಆಗಸ್ಟ್ 18ರಂದು ಪೂರ್ವಾಹ್ನ ಗಂಟೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಎಂಬ ಮಹಿಳೆ ಹೆಣ್ಣುಶಿಶುವಿಗೆ ಜನ್ಮವಿತ್ತಿರುತ್ತಾರೆ. ಬಳಿಕ ಶಿಶುವಿಗೆ ಒಂದು ಕಣ್ಣುಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ್ದಾರೆ. ಆ ಬಳಿಕದಿಂದ ಭವ್ಯಾ ಹಾಗೂ ಆಕೆಯ ಕುಟುಂಬಸ್ಥರು ಆ ಶಿಶುವು ತಮ್ಮದಲ್ಲವೆಂದು ಹೇಳುತ್ತಿದ್ದಾರೆ. ಮಾತ್ರವಲ್ಲ ತಮ್ಮ ಶಿಶುವವನ್ನು ಆಸ್ಪತ್ರೆಯ ಸಿಬ್ಬಂದಿ ಅದಲು ಬದಲು ಮಾಡಿದ್ದಾರೆಎಂದು ಸುಳ್ಳು ಆರೋಪವನ್ನು ಹೊರಿಸಿರುತ್ತಾರೆ.

ಆದ್ದರಿಂದ ಪ್ರಕರಣ ಠಾಣೆಯ ಮೆಟ್ಟಿಲೇರಿ ಪೋಲಿಸ್ ತನಿಖೆ ನಡೆದು ನ್ಯಾಯಾಧೀಶರ ಉಪಸ್ಥಿತಿಯಲ್ಲಿ DNA ಪರೀಕ್ಷೆಯನ್ನು ಮಾಡುವ ಸಲುವಾಗಿ ಪ್ರಕ್ರಿಯೆಯನ್ನು ನಡೆಸಲಾಗಿದೆ. DNA ಪರೀಕ್ಷೆಯ ವರದಿಯನ್ನು ನೇರವಾಗಿ ತನಿಖಾಧಿಕಾರಿಗಳ ಮೂಲಕ ನ್ಯಾಯಾಲಯಕ್ಕೆ ಸಂಬಂಧಿತರು ಸಲ್ಲಿಸಿದ್ದಾರೆ. ಈ ನಡುವೆ ಮಹಿಳೆಯ ಶಿಶುವು ದಕ್ಷಿಣಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿರುತ್ತದೆ.

ಈ ಎರಡು ದಿನಗಳಿಂಬ ಭವ್ಯಾ ತನ್ನ ಶಿಶುವನ್ನು ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಮಾರಾಟ ಮಾಡಿರುತ್ತಾರೆ ಎಂದು ಮಾನಹಾನಿಕರ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದ ಪರಾಮರ್ಶೆಯ ಹಂತದಲ್ಲಿರುವ ಸಂದರ್ಭ ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ. ಆದರೂ ಮಹಿಳೆ ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಬಗ್ಗೆ ಮಾಡಿರುವ ಆರೋಪವು ಸಂಪೂರ್ಣವಾಗಿ ನಿರಾಧಾರವಾಗಿರುತ್ತದೆ ಎಂದು ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here