Home ತಾಜಾ ಸುದ್ದಿ ದಸ್ಕತ್ ತುಳು ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೆಟ್: ಡಿಸೆಂಬರ್ 13 ರಂದು ಚಿತ್ರ ಬೆಳ್ಳಿತೆರೆಗೆ

ದಸ್ಕತ್ ತುಳು ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೆಟ್: ಡಿಸೆಂಬರ್ 13 ರಂದು ಚಿತ್ರ ಬೆಳ್ಳಿತೆರೆಗೆ

0

ಮಂಗಳೂರು: ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ ಸೆವೆಂಟಿ ಸೆವೆನ್ ಸ್ಟುಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ ದಸ್ಕತ್ ತುಳು ಚಲನಚಿತ್ರವು ಇದೇ ಡಿಸೆಂಬರ್ 13 ರಂದು ಬೆಳ್ಳಿತೆರೆಗೆ ಬರಲು ತಯಾರಾಗಿದ್ದು ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೆಟ್ ಪಡೆದುಕೊಂಡು ಮಂಡಳಿಯ ಅಧಿಕಾರಿಗಳಿಂದ ಮೆಚ್ಚುಗೆಗಳಿಸಿದೆ.

ಚಿತ್ರದ ಟ್ರೇಲರ್ ಈಗಾಗಲೇ ಸದ್ದು ಮಾಡುತ್ತಿದ್ದು ತುಳು ಚಿತ್ರಾಭಿಮಾನಿಗಳಿಂದ ಹಾಗೂ ಕನ್ನಡ – ತುಳು ಚಿತ್ರರಂಗದ ದಿಗ್ಗಜರ ಭಾರಿ ಪ್ರಶಂಸೆಗೆ ಪಾತ್ರವಾಗಿದೆ.
ಹೊಸ ತನವನ್ನು ಬಯಸುತ್ತಿರುವ ತುಳು ಚಿತ್ರ ಪ್ರೇಮಿಗಳಿಗೆ ಈ ಚಿತ್ರವು ಇಷ್ಟವಾಗುವುದರಲ್ಲಿ ನೂರು ಮಾತಿಲ್ಲ ಎಂದು ಟ್ರೇಲರ್ ವೀಕ್ಷಿಸಿದ ಸಿನಿತಂತ್ರಜ್ಞರು ಅಭಿಪ್ರಾಯ ತಿಳಿಸಿದ್ದಾರೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದು, ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ ಕಾರ್ಯ ನಿರ್ವಹಿಸಿದ್ದಾರೆ.

ಸಂತೋಷ್ ಆಚಾರ್ಯ ಗುಂಪಲಾಜೆ ಅವರ ಛಾಯಾಗ್ರಹಣದ ದಸ್ಕತ್ ಚಿತ್ರಕ್ಕೆ ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದಾರೆ. ಅಲ್ಲದೇ ಚಿತ್ರಕ್ಕೆ ಸಮರ್ಥನ್ ಎಸ್.ರಾವ್ ಅವರ ಸಂಗೀತವಿದೆ. ದಸ್ಕತ್ ಚಿತ್ರದಲ್ಲಿ ನಾಯಕಿಯಾಗಿ ನೀನಾದೇ ನಾ ಧಾರಾವಾಹಿ ಖ್ಯಾತಿಯ ಭವ್ಯ ಪೂಜಾರಿ ಬಣ್ಣ ಹಚ್ಚಿದ್ದಾರೆ. ಅಲ್ಲದೇ ದೀಕ್ಷಿತ್ ಕೆ ಅಂಡಿಂಜೆ , ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ, ನೀರಜ್ ಕುಂಜರ್ಪ, ಮಿಥುನ್ ರಾಜ್ ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ, ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.
ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿರುವ ದಸ್ಕತ್ ಚಿತ್ರ ತಂಡದಲ್ಲಿ ಸ್ಮಿತೇಶ್ ಬಾರ್ಯ, ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here