Home ಕರಾವಳಿ ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೈನರ್‌..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೈನರ್‌..!

0

ಮುಲ್ಕಿ: ಕಂಟೈನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ನಡೆದಿದೆ.


ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್‌‌ ಫ್ಲೆಕ್ಸ್‌‌ ಕಂಪನಿಯಿಂದ ಮಂಗಳೂರು ಬಂದ‌ರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್‌ ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ.

ಬೆಂಕಿ ಧಗ ಧಗನೇ ಹೊತ್ತಿ ಉರಿಯುತ್ತಿದ್ದಂತೆ ಕಂಗಾಲಾದ ಕಂಟೈನ‌ರ್ ಚಾಲಕ ಹಿಮಾಚಲ ಪ್ರದೇಶ ನಿವಾಸಿ ರಂಜಿತ್‌ ಕೆಳಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here