ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕರ್ನಾಟಕದ ಕರಾವಳಿಗೂ ತಟ್ಟಿದೆ. ಈಗಾಗಲೆ ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಭಾೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲೂ ಡಿಸೆಂಬರ್ 3 ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವ ಇದೆ.