ಪುತ್ತೂರು: ನಗರಸಭಾ ಅಧ್ಯಕ್ಷರು ಸಹಿತ ಇತರರ ವಿರುದ್ಧ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿದ ಆರೋಪಿ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಾಟ್ಸಾಪ್ ಗ್ರೂಪ್ ನಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಇತರರ ವಿರುದ್ಧ ಅವಹೇಳನಕಾರಿಯಾಗಿದ್ದ ಬರೆದಿದ್ದರ ವಿರುದ್ಧ ನಗರಸಭೆ ಅಧ್ಯಕ್ಷೆ ಸಹಿತ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಸದಸ್ಯರು ಠಾಣೆ ಎದುರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
ಇದೀಗ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.